Romans 16:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.
Kannada BSI Bible 2016
ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆಕೆಯನ್ನು ಕರ್ತನ ಶಿಷ್ಯಳೆಂದು ದೇವಜನರಿಗೆ ತಕ್ಕ ಹಾಗೆ ಸೇರಿಸಿಕೊಂಡು ಸಹಾಯವು ಯಾವ ವಿಷಯದಲ್ಲಿ ಬೇಕಾಗಿದ್ದರೂ ಸಹಾಯವನ್ನು ಮಾಡಿರಿ. ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳು.
Kannada Bible (KNCL) BSI 2016
ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.