Romans 16:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
Kannada BSI Bible 2016
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿಸಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
Kannada Bible (KNCL) BSI 2016
ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.