Romans 16:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೆ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
Kannada BSI Bible 2016
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
Kannada Bible (KNCL) BSI 2016
“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.