Romans 16:26 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.
Kannada BSI Bible 2016
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.
Kannada Bible (KNCL) BSI 2016
ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.