Romans 16:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.
Kannada BSI Bible 2016
ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.
Kannada Bible (KNCL) BSI 2016
ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.