Romans 16:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.
Kannada BSI Bible 2016
ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮನೆಯಲ್ಲಿ ಕೂಡುವ ಸಭೆಗೆ ಸಹ ನನ್ನ ವಂದನೆಯನ್ನು ಹೇಳಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೆ ವಂದನೆ.
Kannada Bible (KNCL) BSI 2016
ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು; ಏಷ್ಯಾಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತಯೇಸುವನ್ನು ವಿಶ್ವಾಸಿಸಿದವನು ಆತನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ.