Romans 16:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.
Kannada BSI Bible 2016
ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.
Kannada Bible (KNCL) BSI 2016
ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.