Romans 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
Kannada BSI Bible 2016
ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.
Kannada Bible (KNCL) BSI 2016
ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.