Romans 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.
Kannada BSI Bible 2016
ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಳ್ಳೆದನ್ನು ನಡಿಸುವ ಪ್ರತಿಯೊಬ್ಬನಿಗೆ ಪ್ರಭಾವವೂ ಮಾನವೂ ಮನಶ್ಶಾಂತಿಯೂ ಉಂಟಾಗುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.
Kannada Bible (KNCL) BSI 2016
ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.