Romans 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
Kannada BSI Bible 2016
(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
Kannada Bible (KNCL) BSI 2016
ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು.