Romans 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರಲ್ಲದವರು ಧರ್ಮಶಾಸ್ತ್ರವನ್ನು ಹೊಂದಿಲ್ಲ. ಆದರೆ ಅವರು ಧರ್ಮಶಾಸ್ತ್ರವನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇಯಾದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
Kannada BSI Bible 2016
ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ ತಾವೇ ತಮಗೆ ಧರ್ಮಪ್ರಮಾಣವಾಗಿದ್ದಾರೆ;
Kannada Bible (KNCL) BSI 2016
ಯೆಹೂದ್ಯರಲ್ಲದವರಿಗೆ, ಮೋಶೆಯ ಧರ್ಮಶಾಸ್ತ್ರ ಇರುವುದಿಲ್ಲ. ಅವರು ಅದರ ವಿಧಿನಿಯಮಗಳನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇ ಆದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮವಿಲ್ಲದ ಯೆಹೂದ್ಯರಲ್ಲದವರು ಸ್ವಾಭಾವಿಕವಾಗಿ ನಿಯಮದಲ್ಲಿ ಹೇಳಿದಂತೆ ನಡೆಯುವಾಗ ಅವರಿಗೆ ನಿಯಮವಿಲ್ಲದಿದ್ದರೂ ಅವರ ಅಂತರಂಗವೇ ನಿಯಮವಾಗಿದೆ.