Romans 2:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
Kannada BSI Bible 2016
ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಲೆಯಲ್ಲಿರುವವರಿಗೆ ಬೆಳಕೂ ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೇನೆಂದು ನಂಬಿಕೊಂಡಿದ್ದೀ.
Kannada Bible (KNCL) BSI 2016
ಮಕ್ಕಳಿಗೆ ಶಿಕ್ಷಕನೂ ಆಗಿರುವುದಾಗಿ ದೃಢವಾಗಿ ನಂಬಿಕೊಂಡಿದ್ದೀಯೆ; ಧರ್ಮಶಾಸ್ತ್ರದಲ್ಲಿ ಜ್ಞಾನ ಮತ್ತು ಸತ್ಯ ಮೇಳೈಸಿರುವುದಾಗಿ ಭಾವಿಸುತ್ತೀಯೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?