Romans 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಬೇರೆಯವರಿಗೆ ಉಪದೇಶಿಸುವೆ. ಹೀಗಿರಲು ನೀನು ನಿನಗೇ ಉಪದೇಶ ಮಾಡಿಕೊಳ್ಳಬಾರದೇಕೆ? ಕದಿಯಬಾರದೆಂದು ನೀನು ಜನರಿಗೆ ಹೇಳುವೆ, ಆದರೆ ನೀನೇ ಕದಿಯುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
Kannada BSI Bible 2016
ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಮತ್ತೊಬ್ಬನಿಗೆ ಉಪದೇಶ ಮಾಡುವ ನೀನು ನಿನಗೆ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನು ಕದಿಯುತ್ತೀಯೋ?
Kannada Bible (KNCL) BSI 2016
ಹೀಗೆ, ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೊಳ್ಳಬಾರದೇನು? “ಕದಿಯಬಾರದು” ಎಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತೀಯೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೋ. ಕದಿಯಬಾರದೆಂದು ಸಾರುವ ನೀನು ಕದಿಯುತ್ತೀಯೋ?