Romans 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?
Kannada BSI Bible 2016
ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾದರ ಮಾಡಬಾರದೆಂದು ಹೇಳುವ ನೀನು ಹಾದರ ಮಾಡುತ್ತೀಯೋ? ಮೂರ್ತಿಗಳಲ್ಲಿ ಅಸಹ್ಯಪಡುತ್ತಿರುವ ನೀನು ದೇವಸ್ಥಾನದಲ್ಲಿ ಕಳ್ಳತನ ಮಾಡುತ್ತೀಯೋ?
Kannada Bible (KNCL) BSI 2016
“ವ್ಯಭಿಚಾರ ಮಾಡಬಾರದು” ಎಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೇನು? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ?