Romans 2:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
Kannada BSI Bible 2016
ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಧರ್ಮಶಾಸ್ತ್ರಾನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ಪ್ರಯೋಜನಕರವಾದದ್ದೇ ಸರಿ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
Kannada Bible (KNCL) BSI 2016
ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.