Romans 2:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.
Kannada BSI Bible 2016
ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?
Kannada Bible (KNCL) BSI 2016
ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?