Romans 2:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.
Kannada BSI Bible 2016
ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.
Kannada Bible (KNCL) BSI 2016
ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.

Recommended Reading