Romans 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಆ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
Kannada BSI Bible 2016
ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?
Kannada Bible (KNCL) BSI 2016
ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?