Romans 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
Kannada BSI Bible 2016
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?
Kannada Bible (KNCL) BSI 2016
ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?