Romans 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
Kannada BSI Bible 2016
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.
Kannada Bible (KNCL) BSI 2016
ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.