Romans 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
Kannada BSI Bible 2016
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.
Kannada Bible (KNCL) BSI 2016
ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.