Romans 3:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
Kannada BSI Bible 2016
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.
Kannada Bible (KNCL) BSI 2016
ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.