Romans 3:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
Kannada BSI Bible 2016
ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಹಿಂದಿನ ಕಾಲದ ಪಾಪಗಳನ್ನು ದಂಡಿಸದೆ ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿಸ್ವರೂಪನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವವನಾಗಿಯೂ ಕಾಣಿಸಿಕೊಂಡಿದ್ದಾನೆ.
Kannada Bible (KNCL) BSI 2016
ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.