Romans 3:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
Kannada BSI Bible 2016
ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.
Kannada Bible (KNCL) BSI 2016
ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.