Romans 3:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
Kannada BSI Bible 2016
ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.
Kannada Bible (KNCL) BSI 2016
ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.