Romans 3:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
Kannada BSI Bible 2016
ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Kannada Bible (KNCL) BSI 2016
‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.