Romans 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
Kannada BSI Bible 2016
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.
Kannada Bible (KNCL) BSI 2016
ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”