Romans 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
Kannada BSI Bible 2016
ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾದರೆ ಇನ್ನು ನನಗೆ ಪಾಪಿಯೆಂದು ತೀರ್ಪಾಗುವದು ಯಾಕೆ?
Kannada Bible (KNCL) BSI 2016
ನಮ್ಮ ಅಸತ್ಯತೆಯಿಂದ ದೇವರ ಸತ್ಯತೆ ವ್ಯಕ್ತವಾಗಿ ಅವರ ಮಹಿಮೆ ಬೆಳಗುವುದಾದರೆ ನನಗೇಕೆ ಪಾಪಿಯೆಂದು ತೀರ್ಪಾಗಬೇಕು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೊಂಡು ಅವರ ಮಹಿಮೆಯನ್ನು ಹೆಚ್ಚಿಸುವುದಾದರೆ ನನಗೆ ಪಾಪಿಯೆಂದು ಇನ್ನು ತೀರ್ಪಾಗುವುದು ಏಕೆ?”