Romans 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
Kannada BSI Bible 2016
(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.
Kannada Bible (KNCL) BSI 2016
“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!