Romans 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
Kannada BSI Bible 2016
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
Kannada Bible (KNCL) BSI 2016
ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ಏನು? ಯೆಹೂದ್ಯರಾದ ನಾವು ಯೆಹೂದ್ಯರಲ್ಲದವರಿಗಿಂತಲೂ ಶ್ರೇಷ್ಠರೋ? ಎಂದಿಗೂ ಇಲ್ಲವಲ್ಲ. ಯೆಹೂದ್ಯರಾಗಲಿ, ಯೆಹೂದ್ಯರಲ್ಲದವರಾಗಲಿ ಎಲ್ಲರೂ ಪಾಪದ ಶಕ್ತಿಗೆ ಒಳಗಾದವರೆಂದು ನಾವು ಈಗಾಗಲೇ ತೋರಿಸಿದ್ದೇವೆ.