Romans 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
Kannada BSI Bible 2016
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.
Kannada Bible (KNCL) BSI 2016
ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.