Romans 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
Kannada BSI Bible 2016
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸುನ್ನತಿಯವರಲ್ಲಿ ಯಾರಾರು ಸುನ್ನತಿ ಹೊಂದಿದ್ದಲ್ಲದೆ ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವದಕ್ಕೆ ಮುಂಚೆ ಇದ್ದ ನಂಬಿಕೆಯ ಹೆಜ್ಜೆಗಳನ್ನು ಹಿಡಿದು ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
Kannada Bible (KNCL) BSI 2016
ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.