Romans 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
Kannada BSI Bible 2016
ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.
Kannada Bible (KNCL) BSI 2016
ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.