Romans 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.
Kannada BSI Bible 2016
ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರದವರು ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವೂ ಬರೀದಾಯಿತು.
Kannada Bible (KNCL) BSI 2016
ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.