Romans 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
Kannada BSI Bible 2016
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.
Kannada Bible (KNCL) BSI 2016
ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.