Romans 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದ ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
Kannada BSI Bible 2016
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.
Kannada Bible (KNCL) BSI 2016
ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.