Romans 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
Kannada BSI Bible 2016
(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.
Kannada Bible (KNCL) BSI 2016
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.