Romans 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
Kannada BSI Bible 2016
ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
Kannada Bible (KNCL) BSI 2016
ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.