Romans 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
Kannada BSI Bible 2016
ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
Kannada Bible (KNCL) BSI 2016
ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.