Romans 4:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
Kannada BSI Bible 2016
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ನಂಬಿಕೆಯು ನೀತಿಯೆಂದು ಎಣಿಸಲ್ಪಡುವದು.
Kannada Bible (KNCL) BSI 2016
ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.