Romans 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
Kannada BSI Bible 2016
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
Kannada Bible (KNCL) BSI 2016
ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು.