Romans 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
Kannada BSI Bible 2016
ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಶುಭವಚನವು ಸುನ್ನತಿಯಿದ್ದವರಿಗೆ ಮಾತ್ರವೋ? ಸುನ್ನತಿಯಿಲ್ಲದವರಿಗೆ ಸಹ ಆಗುತ್ತದೋ? ನೋಡೋಣ. ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ಹೇಳುತ್ತೇವಲ್ಲಾ.
Kannada Bible (KNCL) BSI 2016
ಈ ಆಶೀರ್ವಚನವು ಸುನ್ನತಿ ಮಾಡಿಸಿಕೊಂಡವರಿಗೆ ಮಾತ್ರ ಅನ್ವಯಿಸುತ್ತದೆಯೇ? ಇಲ್ಲ, ಸುನ್ನತಿ ಮಾಡಿಸಿಕೊಳ್ಳದವರಿಗೂ ಅನ್ವಯಿಸುತ್ತದೆ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.