Romans 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.
Kannada BSI Bible 2016
ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನು ದೇವಾಜ್ಞೆಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚಕಪುರುಷನಾಗಿದ್ದಾನೆ.
Kannada Bible (KNCL) BSI 2016
ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಮರಣವು ಆದಾಮನಿಂದ ಮೋಶೆಯವರೆಗೂ ದೊರೆತನ ಮಾಡುತ್ತಿತ್ತು. ಆದಾಮನು ಮಾಡಿದ ಅಪರಾಧಕ್ಕೆ ಸಮಾನವಾಗಿ ಪಾಪಮಾಡಿದವರ ಮೇಲೆಯೂ ಅದು ದೊರೆತನ ಮಾಡುತ್ತಿತ್ತು. ಆದಾಮನು ಮುಂದೆ ಬರಲಿಕ್ಕಿದ್ದ ಒಬ್ಬಾತನಿಗೆ ಸಂಕೇತವಾಗಿದ್ದಾನೆ.