Romans 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ ‘ಜೀವ’ವನ್ನು ಅನೇಕ ಜನರು ಹೊಂದಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
Kannada BSI Bible 2016
ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ಹೆಚ್ಚುಕಡಿಮೆ ಉಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಎಲ್ಲಾ ಮನುಷ್ಯರು ಸತ್ತದ್ದು ನಿಶ್ಚಯವಾಗಿರಲಾಗಿ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಎಲ್ಲಾ ಮನುಷ್ಯರಿಗೆ ಹೇರಳವಾಗಿ ಸಿದ್ಧವಾಗಿರುವದು ಮತ್ತೂ ನಿಶ್ಚಯವಲ್ಲವೇ.
Kannada Bible (KNCL) BSI 2016
ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?