Romans 5:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಆ ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
Kannada BSI Bible 2016
ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಫಲ ಬಂದಂತೆ ಈ ವರವು ಬರಲಿಲ್ಲ; ಹೇಗಂದರೆ ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ನಿರ್ಣಯವು ಉಂಟಾಯಿತು, ಆದರೆ ದೇವರ ಕೃಪಾದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ಅವರನ್ನು ನೀತಿವಂತರೆಂದು ನಿರ್ಣಯಿಸುವಂಥದಾಗಿದೆ.
Kannada Bible (KNCL) BSI 2016
ದೇವರ ಉಚಿತಾರ್ಥವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ.