Romans 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಆ ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
Kannada BSI Bible 2016
ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ.
Kannada Bible (KNCL) BSI 2016
ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.