Romans 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
Kannada BSI Bible 2016
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
Kannada Bible (KNCL) BSI 2016
ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.