Romans 5:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
Kannada BSI Bible 2016
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.
Kannada Bible (KNCL) BSI 2016
ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.