Romans 5:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
Kannada BSI Bible 2016
ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
Kannada Bible (KNCL) BSI 2016
ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.