Romans 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
Kannada BSI Bible 2016
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.
Kannada Bible (KNCL) BSI 2016
ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.